Isaiah 30:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
Kannada BSI Bible 2016
ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಶ್ವಾಸವು ತುಂಬಿತುಳುಕಿ ಕಂಠದ ಮಟ್ಟಿಗೂ ಏರುವ ತೊರೆ; ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವದಕ್ಕೆ ಬರುತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ಕಟಬಾಯಲ್ಲಿರುವದು.
Kannada Bible (KNCL) BSI 2016
ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನ ಶ್ವಾಸವು ತುಂಬುತ್ತಾ, ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.