Isaiah 30:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
Kannada BSI Bible 2016
ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೋ ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ; ಇಸ್ರಾಯೇಲ್ಯರ ಶರಣನ ಸಾನ್ನಿಧ್ಯವನ್ನು ಬಯಸಿ ಯೆಹೋವನ ಪರ್ವತಕ್ಕೆ ಪಿಳ್ಳಂಗೋವಿಯ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
Kannada Bible (KNCL) BSI 2016
ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು.