Isaiah 30:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
Kannada BSI Bible 2016
ಪೂರ್ವದಿಂದ (ಪುರಾತನದಿಂದ) ತೋಫೆತ್‌ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.
Kannada Bible (KNCL) BSI 2016
ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.