Isaiah 30:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
Kannada BSI Bible 2016
ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
Kannada Bible (KNCL) BSI 2016
ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.