Isaiah 31:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
Kannada BSI Bible 2016
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;
Kannada Bible (KNCL) BSI 2016
ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.