Isaiah 31:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಮತ್ತು ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
Kannada BSI Bible 2016
ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಆತನೂ ವಿವೇಕಿ, ತನ್ನ ಮಾತುಗಳನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು; ಕೆಡುಕರ ಮನೆತನಕ್ಕೂ ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
Kannada Bible (KNCL) BSI 2016
ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.