Isaiah 31:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
Kannada BSI Bible 2016
ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
Kannada Bible (KNCL) BSI 2016
ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ: “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.