Isaiah 31:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು “ಹಾದುಹೋಗಿ” ಜೆರುಸಲೇಮನ್ನು ರಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
Kannada BSI Bible 2016
ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಣ್ಣುಹಕ್ಕಿಗಳು ಹಾರಿಯಾಡುತ್ತಾ [ಮರಿಗಳನ್ನು] ಕಾಪಾಡುವಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು, ಹಾದು ಹೋಗುತ್ತಾ ಅಪಾಯದಿಂದ ತಪ್ಪಿಸುವನು.
Kannada Bible (KNCL) BSI 2016
ಹಕ್ಕಿಗಳು ಹಾರಾಡುತ್ತಾ ತನ್ನ ಮರಿಗಳನ್ನು ಕಾಪಾಡುವಂತೆ, ಸೇನಾಧೀಶ್ವರ ಸರ್ವೇಶ್ವರನಾದ ನಾನು ಜೆರುಸಲೇಮನ್ನು ಕಾಪಾಡುವೆನು. ಅದನ್ನು ಸಂರಕ್ಷಿಸಿ ಕಾಯುವೆನು, ಅಪಾಯದಿಂದ ತಪ್ಪಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮನ್ನು ಕಾಪಾಡುವರು. ಅದನ್ನು ರಕ್ಷಿಸಿ ಕಾಯುವರು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವರು.