Isaiah 31:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜನರು ತಯಾರಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಪೂಜಿಸುವದನ್ನು ನಿಲ್ಲಿಸುವರು. ನೀವು ಆ ವಿಗ್ರಹಗಳನ್ನು ತಯಾರಿಸಿದಾಗ ನಿಜವಾಗಿಯೂ ಪಾಪಮಾಡಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.
Kannada BSI Bible 2016
ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ಕೈಯಿಂದ ರೂಪಿಸಿಕೊಂಡಿರುವ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಟುಬಿಡುವನು; ಅವುಗಳನ್ನು ರೂಪಿಸಿದ್ದು ಪಾಪವಷ್ಟೆ.
Kannada Bible (KNCL) BSI 2016
ನೀವು ಪಾಪಕಳಂಕಿತವಾದ ನಿಮ್ಮ ಕೈಯಿಂದ ನಿರ್ಮಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಎತ್ತಿ ಬಿಸಾಡುವ ದಿನ ಬರಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.