Isaiah 31:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.
Kannada BSI Bible 2016
ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು.
Kannada Bible (KNCL) BSI 2016
ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.