Isaiah 32:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
Kannada BSI Bible 2016
ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು.
Kannada Bible (KNCL) BSI 2016
ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.