Isaiah 32:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
Kannada BSI Bible 2016
ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಶ್ಚಿಂತೆಯವರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ ಬೆತ್ತಲೆಯಾಗಿ ಸೊಂಟಕ್ಕೆ [ಗೋಣಿತಟ್ಟನ್ನು] ಸುತ್ತಿಕೊಳ್ಳಿರಿ.
Kannada Bible (KNCL) BSI 2016
ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.