Isaiah 32:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಜನರ ದೇಶಕ್ಕಾಗಿ ಕೂಗಿರಿ. ಯಾಕೆಂದರೆ ಅದರಲ್ಲಿ ಕೇವಲ ಹಣಜಿಯೂ ಮುಳ್ಳುಗಿಡಗಳೂ ಬೆಳೆಯುತ್ತವೆ. ಒಂದು ಕಾಲದಲ್ಲಿ ಸಂತೋಷಭರಿತವಾಗಿದ್ದ ಪಟ್ಟಣಕ್ಕಾಗಿಯೂ ಎಲ್ಲಾ ಮನೆಗಳಿಗಾಗಿಯೂ ಅಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
Kannada BSI Bible 2016
ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರ ಭೂವಿುಯ ಮೇಲೂ ಉತ್ಸಾಹಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆಗಳ ಮೇಲೂ ಮುಳ್ಳುಗಿಳ್ಳು ಹತ್ತಿಕೊಳ್ಳುವದು;
Kannada Bible (KNCL) BSI 2016
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದರುಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ, ಅರಮನೆ ಪಾಳುಬಿದ್ದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.