Isaiah 32:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
Kannada BSI Bible 2016
ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.
Kannada Bible (KNCL) BSI 2016
ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.