Isaiah 32:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು. (Verses 15-16)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
Kannada BSI Bible 2016
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.
Kannada Bible (KNCL) BSI 2016
ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.