Isaiah 32:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
Kannada BSI Bible 2016
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
Kannada Bible (KNCL) BSI 2016
ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.