Isaiah 32:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಗಲಿಬಿಲಿಯಲ್ಲಿರುವವರು ವಿಷಯವನ್ನು ಸ್ಪಷ್ಟವಾಗಿ ಮತ್ತು ಕೂಡಲೇ ತಿಳಿದುಕೊಳ್ಳುವರು. ಈಗ ಸ್ಪಷ್ಟವಾಗಿ ಮಾತಾಡಲಾರದ ಜನರು ಸ್ಪಷ್ಟವಾಗಿಯೂ, ಸರಾಗವಾಗಿಯೂ ಮಾತಾಡಶಕ್ತರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
Kannada BSI Bible 2016
ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತುರಗಾರರ ಮನವು ಅರುಹನ್ನರಿಯುವದು, ತೊದಲುಮಾತಿನವರ ನಾಲಿಗೆಯು ಸ್ವಚ್ಫವಾಗಿಯೂ ಶೀಘ್ರವಾಗಿಯೂ ನುಡಿಯುವದು.
Kannada Bible (KNCL) BSI 2016
ಆತುರಗಾರರ ಬುದ್ಧಿ ಸಾವಧಾನದಿಂದ ಗ್ರಹಿಸುವುದು. ತೊದಲುಮಾತಿನವರ ನಾಲಿಗೆ ಸ್ವಚ್ಛವಾಗಿಯೂ ತ್ವರಿತವಾಗಿಯೂ ನುಡಿಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.