Isaiah 32:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
Kannada BSI Bible 2016
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳ್ಳನ ಸಲಕರಣೆಗಳು ಕೆಟ್ಟವುಗಳೇ; ದೀನದರಿದ್ರರು ನ್ಯಾಯವಾದಿಗಳಾಗಿದ್ದರೂ ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
Kannada Bible (KNCL) BSI 2016
ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.