Isaiah 33:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
Kannada BSI Bible 2016
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
Kannada Bible (KNCL) BSI 2016
ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.