Isaiah 33:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆನ್ನುತ್ತಾನೆ, “ಈಗ ನಾನು ಎದ್ದುನಿಂತು ನನ್ನ ಮಹತ್ವವನ್ನು ತೋರಿಸುವೆನು. ಈಗ ನಾನು ಜನರಿಗೆ ಉನ್ನತೋನ್ನತನಾಗುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
Kannada BSI Bible 2016
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಕೂಡಲೆ ಉನ್ನತೋನ್ನತನಾಗುವೆನು.
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನೆತ್ತಾರೆ: “ಈಗ ಏಳುವೆನು. ಈಗಲೇ ಎದ್ದು ಸಿದ್ಧನಾಗುವೆನು. ಇದೀಗಲೇ ನನ್ನ ಮಹಿಮೆಯನ್ನು ತೋರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆನ್ನುತ್ತಾರೆ, “ನಾನು ಈಗ ಏಳುವೆನು. ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು. ಈಗ ಉನ್ನತೋನ್ನತನಾಗುವೆನು.