Isaiah 33:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಕಣ್ಣುಗಳು ಸೌಂದರ್ಯ ಪ್ರಭಾವಗಳಿಂದ ತುಂಬಿದ ರಾಜನನ್ನು (ದೇವರನ್ನು) ನೋಡುವವು. ನೀವು ಮಹಾ ದೊಡ್ಡ ದೇಶವನ್ನು ನೋಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.
Kannada BSI Bible 2016
ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಭೂಷಿತರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ಕಣ್ಣು ತುಂಬಾ ನೋಡುವಿರಿ.
Kannada Bible (KNCL) BSI 2016
ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು. ಅತಿವಿಸ್ತಾರವಾದ ದೇಶವನ್ನು ಕಣ್ಣು ತುಂಬಾ ನೋಡುವಿರಿ.