Isaiah 33:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಂದಿನ ಕಾಲದಲ್ಲಿ ನೀವು ಅನುಭವಿಸಿದ ಸಂಕಟಗಳನ್ನು ನೆನಪುಮಾಡಿಕೊಳ್ಳುವಿರಿ. ನೀವು ಹೀಗೆ ಭಾವಿಸಿಕೊಳ್ಳುವಿರಿ: “ಬೇರೆ ದೇಶಗಳಿಂದ ಬಂದ ಜನರೆಲ್ಲಿದ್ದಾರೆ? ನಮಗೆ ಅರ್ಥವಾಗದಂಥ ಭಾಷೆಯಲ್ಲಿ ಅವರು ಮಾತಾಡುತ್ತಿದ್ದರು. ಪರದೇಶದ ಅಧಿಕಾರಿಗಳು, ತೆರಿಗೆ ಎತ್ತುವವರು ಎಲ್ಲಿ? ನಮ್ಮ ಕೋಟೆಗಳನ್ನು, ಬುರುಜುಗಳನ್ನು ಲೆಕ್ಕಿಸಲು ಬಂದ ಗೂಢಚಾರರೆಲ್ಲಿ? ಅವರೆಲ್ಲಾ ಹೋಗಿಬಿಟ್ಟರು. ನೀವೆಂದೂ ಆ ಜನರನ್ನು ಕಾಣದೆ ಇರುವಿರಿ.” (Verses 18-19)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.
Kannada BSI Bible 2016
ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೀವು [ಹಿಂದಿನ] ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ - [ಕಪ್ಪವನ್ನು] ಲೆಕ್ಕಿಸಿದವನು ಎಲ್ಲಿ, ತೂಕಮಾಡಿದವನು ಎಲ್ಲಿ, ಬುರುಜುಗಳನ್ನು ಗಣಿಸಿದವನು ಎಲ್ಲಿ ಅಂದುಕೊಳ್ಳುವಿರಿ.
Kannada Bible (KNCL) BSI 2016
ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ - “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಗಣಿಸಿದವನು ಎಲ್ಲಿ?” ಎಂದು ಹೇಳಿಕೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕ ಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.