Isaiah 33:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು. (Verses 21-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.
Kannada BSI Bible 2016
ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು.
Kannada Bible (KNCL) BSI 2016
ಅಲ್ಲಿ ಸರ್ವೇಶ್ವರ ತಮ್ಮ ಶಕ್ತಿಯನ್ನು ತೋರ್ಪಡಿಸುವರು. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಯೆಹೋವ ದೇವರು ನಮ್ಮ ಬಲಶಾಲಿಯಾಗಿರುತ್ತಾರೆ. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟುವುದಿಲ್ಲ.