Isaiah 33:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇಶವು ಅಸ್ವಸ್ಥತೆಯಿಂದ ಸಾಯುತ್ತಿದೆ. ಲೆಬನೋನ್ ನಾಚಿಗೊಂಡು ಒಣಗುತ್ತಿದೆ. ಶಾರೋನ್ ತಗ್ಗು ಒಣಗಿ ನಿರ್ಜನವಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಿಂದೆ ಬಹು ಅಂದವಾದ ಸಸಿಗಳನ್ನು ಬೆಳೆಯಿಸುತ್ತಿದ್ದವು. ಈಗ ಅವುಗಳು ಅಲ್ಲಿ ಬೆಳೆಯುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
Kannada BSI Bible 2016
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್‌ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್‌ ಬೆಂಗಾ ಡಾಗಿದೆ. ಬಾಷಾನ್‌ ಮತ್ತು ಕರ್ಮೆಲ್‌ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.
Kannada Bible (KNCL) BSI 2016
ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.