Isaiah 34:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.
Kannada BSI Bible 2016
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳೇ, ಸಮೀಪಿಸಿ ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂವಿುಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವದೆಲ್ಲವೂ ಆಲಿಸಲಿ.
Kannada Bible (KNCL) BSI 2016
ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ. ಭೂಮಿಯೂ, ಅದರಲ್ಲಿರುವ ಸಮಸ್ತವೂ; ಲೋಕವೂ, ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.