Isaiah 34:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು ‘ಬೆಂಗಾಡಿನ ಮರುಭೂಮಿ’ ಎಂದು ಕರೆಯಲ್ಪಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.
Kannada BSI Bible 2016
ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಕೊಕ್ಕರೆ ಮುಳ್ಳುಹಂದಿಗಳ ಹಕ್ಕು ಆಗುವದು; ಕಾಗೆಗೂಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ಹಾಳೆಂಬ ನೂಲನ್ನೂ ಪಾಳೆಂಬ ಮಟ್ಟಗೋಲನ್ನೂ ಎಳೆಯುವನು.
Kannada Bible (KNCL) BSI 2016
ಅದು ಹದ್ದುಗಳ, ಮುಳ್ಳುಹಂದಿಗಳ ಸ್ವಾಧೀನವಾಗುವುದು. ಕಾಗೆಗೂಗೆಗಳಿಗೆ ಅದು ಗೂಡಾಗುವುದು. ಸರ್ವೇಶ್ವರ ಹಾಳುಪಾಳನ್ನೇ ಅದರ ಅಳತೆಗೋಲನ್ನಾಗಿಯೂ ಅಸ್ತವ್ಯಸ್ತತೆಯನ್ನೇ ಅದರ ಮಟ್ಟಗೋಲನ್ನಾಗಿಯೂ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬಕಪಕ್ಷಿಯು ಮತ್ತು ಮುಳ್ಳುಹಂದಿಯು ಅದನ್ನು ಆವರಿಸಿಕೊಳ್ಳುವುವು. ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವುವು. ಗಲಿಬಿಲಿ ಎಂಬ ನೂಲನ್ನು, ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.