Isaiah 34:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.
Kannada BSI Bible 2016
ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿನ ಅರಮನೆಗಳಲ್ಲಿ ದಬ್ಬೆಗಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವವು; ಅದು ನರಿಗಳಿಗೆ ಹಕ್ಕೆಯಾಗಿಯೂ ಉಷ್ಟ್ರಪಕ್ಷಿಗಳಿಗೆ ಎಡೆಯಾಗಿಯೂ ಇರುವದು.
Kannada Bible (KNCL) BSI 2016
ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು.