Isaiah 34:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ಹಾವುಗಳು ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಅಲ್ಲಿಯೇ ಮೊಟ್ಟೆಗಳನ್ನಿಡುವವು, ಮೊಟ್ಟೆಗಳು ಒಡೆದಾಗ ಸಣ್ಣ ಹಾವುಮರಿಗಳು ಆ ಕತ್ತಲೆಯ ಜಾಗದಲ್ಲಿ ಹರಿದಾಡುವವು. ಹೆಂಗಸರು ಪರಸ್ಪರ ಸಂಧಿಸಿ ಮಾತನಾಡುವಂತೆ ಸತ್ತಪ್ರಾಣಿಗಳ ಮಾಂಸವನ್ನು ತಿನ್ನುವ ಪಕ್ಷಿಗಳು ಒಟ್ಟಾಗಿ ಸೇರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು.
Kannada BSI Bible 2016
ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾರುವ ಹಾವು ಅಲ್ಲಿ ಗೂಡುಮಾಡಿಕೊಂಡು ಮೊಟ್ಟೆಯಿಕ್ಕಿ ಮರಿಮಾಡಿ ತನ್ನ ಮರೆಯಲ್ಲಿ ಕೂಡಿಸಿಕೊಳ್ಳುವದು; ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು.
Kannada Bible (KNCL) BSI 2016
ಹಾರುವ ಹಾವು ಅಲ್ಲಿ ಗೂಡುಮಾಡಿಕೊಂಡು, ಮೊಟ್ಟೆಯಿಕ್ಕಿ ಮರಿಮಾಡಿ, ರೆಕ್ಕೆಗಳ ಅಡಿಯಲ್ಲಿ ಅವುಗಳನ್ನು ಕೂಡಿಸಿಕೊಳ್ಳುವುದು. ರಣಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಗೂಬೆಯು ಗೂಡನ್ನು ಮಾಡಿಕೊಂಡು, ಮೊಟ್ಟೆ ಇಟ್ಟು, ಮರಿ ಮಾಡಿ, ಅವುಗಳನ್ನು ತನ್ನ ರೆಕ್ಕೆಗಳ ನೆರಳಿನಲ್ಲಿ ಕಾಪಾಡುವುದು. ಅಲ್ಲಿಯೂ ಸಹ ಹದ್ದುಗಳು ಪ್ರತಿಯೊಂದೂ ಜೊತೆಜೊತೆಯಾಗಿ ಸೇರಿರುತ್ತವೆ.