Isaiah 34:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದ್ದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.
Kannada BSI Bible 2016
ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಯಾವದೂ ಇಲ್ಲದಿರದು, ಎಲ್ಲವೂ ಜೊತೆಜೊತೆಯಾಗಿರುವವು; ಆತನ ಬಾಯಿಂದ ಅಪ್ಪಣೆಯಾಯಿತಲ್ಲವೆ, ಆತನ ಆತ್ಮವು ಇವುಗಳನ್ನು ಒಟ್ಟಿಗೆ ಬರಮಾಡಿತಷ್ಟೆ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಗ್ರಂಥದಲ್ಲಿ ನೀವು ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ತಪ್ಪದು. ಜೊತೆಯಿಲ್ಲದೆ ಒಂದೂ ಇರುವುದಿಲ್ಲ. ಏಕೆಂದರೆ ನನ್ನ ಬಾಯಿಯೇ ಅದನ್ನು ಆಜ್ಞಾಪಿಸಿತು. ಅವರ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು.