Isaiah 34:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.
Kannada BSI Bible 2016
ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಸಕಲ ರಾಷ್ಟ್ರಗಳ ಮೇಲೆ ಕೋಪಗೊಂಡಿದ್ದಾರೆ - ಅವುಗಳ ಸೈನ್ಯಗಳ ಮೇಲೆ ರೋಷಗೊಂಡಿದ್ದಾರೆ. ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಲು ನಿಶ್ಚಯಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.