Isaiah 34:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.
Kannada BSI Bible 2016
ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಕ್ಷತ್ರಸೈನ್ಯವೆಲ್ಲಾ ಕ್ಷಯಿಸುವದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವದು; ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಬೀಳುವದು.
Kannada Bible (KNCL) BSI 2016
ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.