Isaiah 34:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
Kannada BSI Bible 2016
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನಮಾಡಿ ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯತೀರಿಸುವದಕ್ಕೆ ದುಮುಕುವದು.
Kannada Bible (KNCL) BSI 2016
ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.