Isaiah 34:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.
Kannada BSI Bible 2016
ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ತೊರೆಗಳು ಶಿಲಾಜತುವಾಗಿ ಹರಿಯುವವು, ದೂಳು ಗಂಧಕವಾಗುವದು, ದೇಶವೆಲ್ಲಾ ಉರಿಯುವ ಶಿಲಾಜತುವಾಗುವದು,
Kannada Bible (KNCL) BSI 2016
ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು.