Isaiah 35:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
Kannada BSI Bible 2016
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
Kannada Bible (KNCL) BSI 2016
ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.