Isaiah 35:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.
Kannada BSI Bible 2016
ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.
Kannada Bible (KNCL) BSI 2016
ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.