Isaiah 35:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
Kannada BSI Bible 2016
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.
Kannada Bible (KNCL) BSI 2016
ಚಂಚಲ ಹೃದಯರಿಗೆ ಹೀಗೆಂದು ಹೇಳಿ: “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.