Isaiah 35:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
Kannada BSI Bible 2016
ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.
Kannada Bible (KNCL) BSI 2016
ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.