Isaiah 35:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
Kannada BSI Bible 2016
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
Kannada Bible (KNCL) BSI 2016
ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.