Isaiah 36:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ಎಲ್ಲಾ ಪಟ್ಟಣಗಳ ವಿರುದ್ಧ ದಂಡೆತ್ತಿ ಬಂದು ಅವುಗಳನ್ನೆಲ್ಲ ಸೋಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
Kannada BSI Bible 2016
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದೊಳಗೆ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
Kannada Bible (KNCL) BSI 2016
ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.