Isaiah 36:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಈಗ ನಾನು ಯೆಹೋವನ ಸಹಾಯವಿಲ್ಲದೆ ಈ ದೇಶವನ್ನು ನಾಶಮಾಡಲು ಬಂದೆನೆಂದು ನೆನಸುತ್ತೀರೋ? “ಎದ್ದುಹೋಗಿ ಈ ದೇಶದ ವಿರುದ್ಧ ಯುದ್ಧ ನಡೆಸಿ ಅದನ್ನು ಸಂಪೂರ್ಣವಾಗಿ ನಾಶಮಾಡು” ಎಂದು ಯೆಹೋವನು ನನಗೆ ಹೇಳಿದ್ದಾನೆ.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು’ ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ” ಎಂದು ಹೇಳಿದನು.
Kannada BSI Bible 2016
ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ ಎಂದು ಹೇಳಿದನು.
Kannada Bible (KNCL) BSI 2016
ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.