Isaiah 36:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ಸೇನಾದಂಡನಾಯಕನಿಗೆ, “ದಯಮಾಡಿ ನಮ್ಮೊಂದಿಗೆ ಅರಮೇಯಿಕ್ ಭಾಷೆಯಲ್ಲಿ ಮಾತನಾಡು. ಆ ಭಾಷೆಯು ನಮಗೆ ಗೊತ್ತು. ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ. ನೀವು ನಮ್ಮ ಭಾಷೆಯಲ್ಲಿ ಮಾತನಾಡಿದರೆ ಗೋಡೆಯ ಮೇಲಿರುವ ನಮ್ಮ ಜನರು ತಿಳಿದುಕೊಳ್ಳುವರು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
Kannada BSI Bible 2016
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು.
Kannada Bible (KNCL) BSI 2016
ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ದಳಪತಿಗೆ, “ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮಾಯಿಕ ಭಾಷೆಯಲ್ಲಿ ಮಾತನಾಡಿ, ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರು ಭಾಷೆಯಲ್ಲಿ ಮಾತನಾಡಬೇಡಿ, ಅದು ಪೌಳಿಗೋಡೆಯ ಮೇಲಿರುವ ಎಲ್ಲರಿಗೂ ಅರ್ಥವಾಗುತ್ತದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.