Isaiah 36:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಅಶ್ಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಕೀಯನು ಹೇಳಿದರೆ ಅವನನ್ನು ನಂಬಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ,
Kannada BSI Bible 2016
ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ.
Kannada Bible (KNCL) BSI 2016
ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’