Isaiah 36:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, ‘‘ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ’’ ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
Kannada BSI Bible 2016
ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
Kannada Bible (KNCL) BSI 2016
‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?