Isaiah 36:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಶೂರದ ರಾಜನಾದ ಸನ್ಹೇರೀಬನು ತನ್ನ ಸೇನಾದಂಡನಾಯಕನನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಸೇನಾದಂಡನಾಯಕ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರುಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
Kannada BSI Bible 2016
ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬವನನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
Kannada Bible (KNCL) BSI 2016
ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು.