Isaiah 36:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ!’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.
Kannada BSI Bible 2016
ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.