Isaiah 36:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ಸೇನಾದಂಡನಾಯಕನಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಕೀಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.
Kannada BSI Bible 2016
ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.
Kannada Bible (KNCL) BSI 2016
ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ರಾಜ ಹಿಜ್ಕೀಯನು ಆಜ್ಞಾಪಿಸಿದ್ದರಿಂದ ಆ ಮೂವರು ಏನನ್ನು ಹೇಳದೆ ಸುಮ್ಮನಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.