Isaiah 36:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Kannada BSI Bible 2016
ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Kannada Bible (KNCL) BSI 2016
ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.