Isaiah 36:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಿಂದ ಮೂರು ಮಂದಿ ಸೇನಾದಂಡನಾಯಕನೊಂದಿಗೆ ಮಾತನಾಡಲು ಹೊರಟರು. ಅವರು ಯಾರೆಂದರೆ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಆಸಾಫನ ಮಗನಾದ ಯೋವ ಮತ್ತು ಶೆಬ್ನ. ಎಲ್ಯಾಕೀಮನು ಅರಮನೆಯ ಆಡಳಿತಗಾರನಾಗಿದ್ದನು; ಯೋವನು ದಾಖಲೆಕಾರನಾಗಿದ್ದನು; ಶೆಬ್ನ ಅರಮನೆಯ ಕಾರ್ಯದರ್ಶಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು.
Kannada BSI Bible 2016
ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಬಂದರು.
Kannada Bible (KNCL) BSI 2016
ಆಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ‍ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬ ಮೂವರು ಅಲ್ಲಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವನ ಬಳಿಗೆ ಬಂದರು.