Isaiah 36:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇನಾದಂಡನಾಯಕನು ಅವರಿಗೆ, “ಮಹಾರಾಜನಾದ ಅಶ್ಶೂರದ ಅರಸನು ಹಿಜ್ಕೀಯನಿಗೆ ಹೇಳುವುದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವುದೇನೆಂದರೆ: ‘ನೀನು ಯಾವುದರ ಮೇಲೆ ಭರವಸವಿಟ್ಟಿರುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?
Kannada BSI Bible 2016
ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
Kannada BSI JV (ಕನ್ನಡ ಸತ್ಯವೇದವು J.V. (BSI))
ರಬ್ಷಾಕೆಯು ಅವರಿಗೆ - ನೀವು ಹೋಗಿ ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ - ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
Kannada Bible (KNCL) BSI 2016
ದಳಪತಿ ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ: “ನಿನ್ನ ಭರವಸೆಗೆ ಆಧಾರವಾದರೂ ಏನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?