Isaiah 36:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
Kannada BSI Bible 2016
ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ!
Kannada Bible (KNCL) BSI 2016
‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?